ನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷರ ಪದಗ್ರಹಣ

ಬಳ್ಳಾರಿ, ಸೆ.10: ಜ್ಯಾತ್ಯಾತೀತ ಜನತಾದಳ ಪಕ್ಷದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಕೂಡ್ಲಿಗಿಯ ಮಾಜಿ ಶಾಸಕ ಎನ್.ಟಿ.ಬೊಮ್ಮಣ್ಣ ಅವರು, ನಗರದ ಕೆ.ಸಿ.ರಸ್ತೆಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬೆಳಿಗ್ಗೆ 11.00 ಗಂಟೆಗೆ ನೂತನ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಈ ಸಮಾರಂಭಕ್ಕೆ ಪಕ್ಷದ ಜಿಲ್ಲೆಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಬೇಕೆಂದು ಜಿಲ್ಲಾ ಜೆಡಿಎಸ್ ಕಛೇರಿ ಪ್ರಕಟಣೆ ಕೋರಿದೆ.

Leave a Comment