ನಾಳೆ ತಾ.ಪಂ ಸಾಮಾನ್ಯ ಸಭೆ

ದಾವಣಗೆರೆ ಸೆ.20; ತಾಲ್ಲೂಕು ಪಂಚಾಯತಿಯ ಸಾಮಾನ್ಯ ಸಭೆಯನ್ನು ತಾ.ಪಂ. ಅಧ್ಯಕ್ಷರಾದ ಮಮತ ಮಲ್ಲೇಶಪ್ಪ ಇವರ ಅಧ್ಯಕ್ಷತೆಯಲ್ಲಿ ಸೆ. 21 ರಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ದಾವಣಗೆರೆ ತಾ.ಪಂ ಕಾರ್ಯನಿವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====
ವಾಲ್ಮೀಕಿ ಜಯಂತಿ ಆಚರಣೆ;  ಪೂರ್ವಭಾವಿ ಸಭೆ
ದಾವಣಗೆರೆ ಸೆ.20; ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 13 ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸುವ ಬಗ್ಗೆ ಚರ್ಚಿಸಲು ಸೆ.21 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಸಭೆಗೆ ಸಮಾಜದ ಮುಖಂಡರು, ಅಧಿಕಾರಿ ವರ್ಗದವರು ಆಗಮಿಸಿ, ತಮ್ಮ ಸೂಕ್ತ ಸಲಹೆ ಸಹಕಾರ ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====
ನಗರದಾದ್ಯಂತ ಮದ್ಯ ನಿಷೇಧ
ದಾವಣಗೆರೆ ಸೆ.20; ನಗರದ ಪಿ.ಜೆ.ಬಡಾವಣೆ, ರಾಂ&ಕೋ ಸರ್ಕಲ್ ಗಣೇಶ ದೇವಸ್ಥಾನ ಟ್ರಸ್ಟ್ ಮತ್ತು ಗೆಳೆಯರ ಬಳಗ ದಾವಣಗೆರೆ ಇದರ ಅಧ್ಯಕ್ಷರಾದ ಜೊಳ್ಳಿ ಗುರು ಇವರ ನೇತೃತ್ವದಲ್ಲಿ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾ ಗಣಪತಿ ಮೂರ್ತಿಯ ವಿಸರ್ಜನಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವ ನಿಟ್ಟಿನಲ್ಲಿ ನಗರದಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.  ಸೆ. 21 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 12(1) ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿರುತ್ತಾರೆ. ಈ ಆದೇಶವನ್ನು ಸಂಬಂಧಿಸಿದ ಅಬಕಾರಿ, ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಲು ಪ್ರಕಟಣೆ ತಿಳಿಸಿದೆ.

Leave a Comment