ನಾಳೆ ಧರ್ಮಸ್ಥಳದಲ್ಲಿ ವಿಶ್ವಯೋಗ ದಿನಾಚರಣೆ

ಉಜಿರೆ, ಜೂ.೨೦- ಧರ್ಮಸ್ಥಳದ ಶಾಂತಿವ ಟ್ರಸ್ಟ್ ಹಾಗೂ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಜಂಟಿ ಆಶ್ರಯದಲ್ಲಿ ಜೂ.೨೧ ರಂದು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿಐದನೆ ವಿಶ್ವಯೋಗ ದಿನಾಚರಣೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.

ಬೆಳಿಗ್ಗೆ ಗಂಟೆ ೭ ಗಂಟೆಯಿಂದ ೭.೪೫ ರ ವರೆಗೆ ಒಂದು ಸಾವಿರ ಶಿಬಿರಾರ್ಥಿ ಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ

ನಡೆಯುತ್ತದೆ. ಬಳಿಕ ಎಂಟು ಗಂಟೆಗೆ

ನಡೆಯುವ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ರಾಜೀವ್ ಗಾಂದಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್. ಸಚ್ಚಿದಾನಂದ, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮತ್ತು ಸಿಂಡಿಕೇಟ್ ಬ್ಯಾಂಕಿನ ಮಹಾ ಪ್ರಬಂಧಕ ಭಾಸ್ಕರ ಹಂದೆ ಭಾಗವಹಿಸುವರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಸಭಾ ಕಾರ್ಯಕ್ರಮದ ಬಳಿಕ ಧರ್ಮಸ್ಥಳ ಮತ್ತು ಶಾಂತಿವನ ಪರಿಸರದಲ್ಲಿಯೋಗ ಪ್ರತಿನಿಧಿಗಳಿಂದ ಸ್ವಚ್ಛತಾ ಅಭಿತಯಾನ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಆಯುಷ್ ಮಂತ್ರಾಯಲದ ನಿರ್ದೇಶನದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ ಹದಿನೈದು ಕೇಂದ್ರಗಳಲ್ಲಿ ಹತ್ತು ದಿನಗಳ ಕಾಲ ಸಾವಿರಾರು ಜನರಿಗೆ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಆಯಾ ಜಿಲ್ಲಾ ಕೇಂದ್ರಗಳಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯುತ್ತದೆ.

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ಶುಕ್ರವಾರ ಬೆಳಿಗ್ಗೆ ಗಂಟೆ ೭ ರಿಂದ ೭.೪೫ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯುತ್ತದೆ.

ಬೆಳ್ತಂಗಡಿ ತಾಲೂಕಿನಎಲ್ಲಾ ಶಾಲೆಗಳಲ್ಲಿ ಜೂನ್ ೧೦ ರಿಂದ ೨೦ರ ವರೆಗೆ ಯೋಗ ತರಬೇತಿ ಕಾರ್ಯಕ್ರಮ ನಡೆಸಿ ನಾಳೆ ಏಕ ಕಾಲದಲ್ಲಿ ಸಾಮೂಹಿಕ ಯೋಗ ಪ್ರದರ್ಶನ, ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರ ನಡೆಯುತ್ತದೆ. ಬಳಿಕ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Leave a Comment