ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ

ಬೆಳಗಾವಿ.ಸೆ.23. ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಕಚೇರಿ, ಆವರಣದಲ್ಲಿ‌ ಪ್ರತಿಭಟನಾಕಾರರು ಪ್ರತಿಭಟನೆ ಮಾಡುವಂತಿಲ್ಲ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಗರದ ಆರ.ಟಿ.ಓ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೂ ಪ್ರತಿಭಟನೆ ಆಯೋಜಿಸಲಾಗಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಷರತ್ತು ಬದ್ಧ ಅನುಮತಿ ನೀಡಲಾಗುತ್ತಿದೆ ಎಂದರು.

ನಾಳೆ ಬೆಳಗ್ಗೆಯಿಂದ ಪ್ರತಿಭಟನಾ ಪಾದಯಾತ್ರೆ ಮುಗಿಯುವ ವರೆಗೂ ಪೊಲೀಸ್ ಬೀಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಷರತ್ತು  ಹಾಕಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ, ಆರ.ಟಿ.ಓ ವೃತ್ತದಿಂದ ಚೆನ್ನಮ್ಮ ವರೆಗಿನ ವಾಹನ ಸಂಚಾರದ ಮಾರ್ಗವನ್ನು ಬದಲಿಸಲಾಗುತ್ತಿದೆ ಎಂದು ತಿಳಿಸಿದರು

Leave a Comment