ನಾಳೆ ವಿದ್ಯುತ್ ಕಡಿತ

ಬಳ್ಳಾರಿ,ಮೇ31: ನಗರದ ತಾಳೂರು ರಸ್ತೆಯ ಕಾಲುವೆಯ ಮೇಲೆ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಗಲೀಕರಣ ಕಾರ್ಯವನ್ನು ಜೂ.1ರಂದು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸದರಿ ಪ್ರದೇಶದಲ್ಲಿ ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ಪರಿವರ್ತಕಗಳು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 1 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಎಫ್-13ರ ವ್ಯಾಪ್ತಿಗೆ ಬರುವ. ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತ್ರೀ ನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ವೃತ್ತ, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ, ಸೂರ್ಯ ಕಾಲೋನಿಗಳಲ್ಲಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.ಆದ್ದರಿಂದ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಜೆಸ್ಕಾಂನೊಂದಿಗೆ ಸಹಕರಿಸಬೇಕು ಎಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a Comment