ನಾಳೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ದಾವಣಗೆರೆ ಅ.9;    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗ, ಜಿಲ್ಲಾ ಮನೋವೈದ್ಯಕೀಯ ವಿಭಾಗ, ಜಿಲ್ಲಾ ಚಿಗಟೇರಿ ಆಸ್ಪತ್ರೆ, ದಿ ಅಸೋಸಿಯೇಷನ್ ಆಫ್ ಪೀಪಲ್‍ವಿತ್ ಡಿಸೆಬಿಲಿಟಿ ಆರ್ಗನೈಜೇಶನ್ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಅ.10 ರಂದು ಬೆಳಿಗ್ಗೆ 9.30ಕ್ಕೆ ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಲೈಬ್ರರಿ ಹಾಲ್‍ನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಅಂಬಾದಾಸ್ ಕುಲಕರ್ಣಿ ಇವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜೆ.ಜೆ.ಎಂ. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಸ್.ಬಿ.ಮುರುಗೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್. ಬಡಿಗೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ಚೀಗಟೇರಿ ಆಸ್ಪತ್ರೆಯ ಅಧೀಕ್ಷಕ ಡಾ.ಜೆ.ನಾಗರಾಜ್, ಜಿಲ್ಲಾ ಕುಷ್ಠರೋಗ ನಿವಾರಣಾ ಮತ್ತು ಜಿಲ್ಲಾ ಮಾನಸಿಕ ಕಾರ್ಯಕ್ರಮದ ಅಧಿಕಾರಿ ಡಾ.ಪಿ.ಡಿ.ಮುರುಳೀಧರ್, ಜೆ.ಜೆ.ಎಂ. ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಸಿ.ವೈ.ಸುದರ್ಶನ್, ಜಿಲ್ಲಾ ಚೀಗಟೇರಿ ಆಸ್ಪತ್ರೆಯ ಜಿಲ್ಲಾ ಮನೋವೈದ್ಯ ಡಾ.ಹೆಚ್.ನಾಗರಾಜ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ.ಮಂಜುನಾಥ್,ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್.ಅರುಣ್‍ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮನೋವೈದ್ಯ ಡಾ.ಗಂಗಂ ಸಿದ್ಧಾರೆಡ್ಡಿ, ದಾವಣಗೆರೆ ಎಪಿಡಿ ಸಂಸ್ಥೆಯ ಎಸ್.ರವಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Comment