ನಾಳೆ ಸಂಜೆ ಶಿವಗೋಷ್ಠಿ

ದಾವಣಗೆರೆ.ಜು.12; ನಗರದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ಬಸಪ್ಪ ಸಭಾಂಗಣದಲ್ಲಿ ನಾಳೆ ಸಂಜೆ 6.30ಕ್ಕೆ ಶಿವಗೋಷ್ಠಿ,ವಚನಸಿರಿ 50 ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಸಾಣೆಹಳ್ಳಿ ಮಠದ ಶ್ರೀ ಡಾ. ಪಂಡಿತಾರಾಧ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.ಸಂಸದ ಜಿ.ಎಂ ಸಿದ್ದೇಶ್ವರ್ ಅವರಿಗೆ ಸಮಾರಂಭದಲ್ಲಿ ಸನ್ಮಾನ ನೆರವೇರಿಸಲಾಗುವುದು.ಶಿವಗೋಷ್ಠಿ ಸಮಿತಿ ಅಧ್ಯಕ್ಷ ಎಂ.ಬಿ ಸೋಮಶೇಖರ ಗೌಡ್ರು ಅಧ್ಯಕ್ಷತೆ ವಹಿಸಲಿದ್ದಾರೆ.ನಿವೃತ್ತ ಪ್ರಾಚಾರ್ಯ ಜಿ.ಬಿ ಚಂದ್ರಶೇಖರಪ್ಪ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ.ನಂತರ ಕದಳಿ ಮಹಿಳಾ ವೇದಿಕೆಯಿಂದ ವಚನ ಗಾಯನ ಜರುಗಲಿದೆ ಎಂದು ಶಿವಗೋಷ್ಠಿ ಸಮಿತಿ ಹಾಗೂ ಸಾದರ ನೌಕರ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment