ನಿಂತಿದ್ದ ಕಾರ್‌ಗೆ ಡಿಕ್ಕಿ

ಬೈಕ್ ಸವಾರ ಗಂಭೀರ
ಕಡಬ, ಸೆ.೧೨- ನಿಂತಿದ್ದ ಕಾರಿಗೆ ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮುಖ್ಯರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟಿವಿಎಸ್ ಅಪಾಚಿ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಐತ್ತೂರು ಗ್ರಾಮದ ನೇಲ್ಯಡ್ಕ ನಿವಾಸಿ ಚೆನ್ನಯ್ಯ ಪರವ ಎಂಬವರ ಪುತ್ರ ದಯಾನಂದ(೨೮) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment