ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ನಾಲ್ವರ ದುರ್ಮರಣ

ಮಂಡ್ಯ: ಮೇ.24- ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಕೇರಳ ಮೂಲದ ಜಯದೀಪ್(29) ಹಾಗೂ ಅವರ ಪತ್ನಿ ಜ್ಞಾನತೀರ್ಥ(26), ಕಿರಣ್ (30) ಹಾಗೂ ಅವರ ಪತ್ನಿ ಜಿನ್ಸಿ (27) ಮೃತ ದುರ್ದೈವಿಗಳು. ಕಳೆದ ರಾತ್ರಿ ಈ ಅಪಘಾತ ನಡೆದಿದೆ.
ಕೇರಳ ಮೂಲದ ನಾಲ್ವರು ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಮದ್ದೂರು ಪಟ್ಟಣದ ಕೊಪ್ಪ ಸರ್ಕಲ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment