ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಓರ್ವ ಸಾವು

ತುಮಕೂರು, ಫೆ. ೧೩- ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಣಾವರ ಗೇಟ್ ಬಳಿ ನಡೆದಿದೆ.

ತಾಲ್ಲೂಕಿನ ಲಿಂಗದಹಳ್ಳಿಯ ವಾಸಿ ಲೋಕೇಶ್ ಎಂಬುವರೇ ಮೃತಪಟ್ಟಿರುವ ದುರ್ದೈವಿ. ಗಾಯಗೊಂಡಿರುವ ಇವರ ಪತ್ನಿ ಪವಿತ್ರ ಸ್ಥಿತಿ ಗಂಭೀರವಾಗಿದೆ.

ತಡರಾತ್ರಿ ಲಿಂಗದಹಳ್ಳಿಯಿಂದ ಕುಣಿಗಲ್‌ಗೆ ದ್ವಿಚಕ್ರ ವಾಹನದಲ್ಲಿ ತನ್ನ ಪತ್ನಿ ಜತೆ ಲೋಕೇಶ್ ತೆರಳುತ್ತಿದ್ದರು. ಮಾರ್ಗಮಧ್ಯೆ ಬಾಣಾವರ ಗೇಟ್ ಬಳಿ ಲಾರಿ ಚಾಲಕ ಲಾರಿಯನ್ನು ರಸ್ತೆಬದಿ ನಿಲ್ಲಿಸಿ ಮೂತ್ರ ವಿಸರ್ಜನೆಗಾಗಿ ಕೆಳಗಿಳಿದಿದ್ದನು. ಆ ಸಂದರ್ಭದಲ್ಲಿ ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನ ನಿಂತಿದ್ದ ಲಾರಿಗೆ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಈ ಸಂಬಂಧ ಹೆಬ್ಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment