ನಿಖಿಲ್ ಮದುವೆಯಲ್ಲಿ ನಿಯಮ ಉಲ್ಲಂಘಿಸಿಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು, ಏ.18- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹದಲ್ಲಿ ಯಾವುದೇ ರೀತಿಯ ಲಾಕ್‌ ಡೌನ್ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ‌.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮಗನ ವಿವಾಹ ಸರಳವಾಗಿ ಆಯೋಜಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ಕುಮಾರಸ್ವಾಮಿ ಅವರು ತಮ್ಮ ಪುತ್ರನ ಮದುವೆಯನ್ನು ಸರಳವಾಗಿ ಆಯೋಜನೆ ಮಾಡಿದ್ದಾರೆ. ಸರ್ಕಾರದ ಅನುಮತಿ ಪಡೆದೇ ವಿವಾಹ ಆಯೋಜನೆ‌ ಮಾಡಿದ್ದಾರೆ. ಅವರದ್ದು ದೊಡ್ಡ ಕುಟುಂಬ ಇದ್ದರೂ ಸರಳ ರೀತಿಯಲ್ಲಿ ಮದುವೆ ಮಾಡಿದ್ದಾರೆ. ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡದೆ ಸರಳವಾಗಿ ವಿವಾಹ ನಡೆಸಿದ್ದಕ್ಕೆ ತಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ

Leave a Comment