ನಿಖಿಲ್ ವಿವಾಹಕ್ಕೆ ಅಧಿಕಾರಿಗಳು ಲಾಕ್ ಡೌನ್ ನಿಯಮ ಉಲ್ಲಂಘನೆ; ಹೈಕೋರ್ಟ್ ಬೇಸರ

ಬೆಂಗಳೂರು, ಮೇ 18 – ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರ ಸ್ವಾಮಿ ಪುತ್ರ ನಿಖಿಲ್ ಅವರ ವಿವಾಹಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ವಿವಾಹದ ವೇಳೆ ವಾಹನ ಪಾಸ್ ಗಳನ್ನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಅಧಿಕಾರಿಗಳ ತಪ್ಪನ್ನು ಸರ್ಕಾರ ಸಮರ್ಥಿಸುವಂತಿದೆ ಎಂದಿತು.

ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ವಿಲೇವಾರಿ ಮಾಡಿತು.
ವಿಚಾರಣೆ ವೇಳೆ ಪ್ರಮಾಣ ಪತ್ರ ಸಲ್ಲಿಸಿದ ಸರ್ಕಾರಿ ವಕೀಲರು, ಕುಟುಂಬದ 100 ಮಂದಿ ಸದಸ್ಯರ ಪಾಲ್ಗೊಳ್ಳುವಿಕೆಗೆ ಅನುಮತಿ ಪಡೆಯಲಾಗಿತ್ತು ಎಂದು ವಿವರಿಸಿದರು.

Leave a Comment