ನೂರಕ್ಕೆ ನೂರರಷ್ಟು ಸುಳ್ಳು – ಸುಮಲತ

ಜೆಡಿಎಸ್ ಪಕ್ಷದಿಂದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡುವ ಬಗ್ಗೆ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ನನ್ನ ಬಳಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಸುಮಲತ ಅಂಬರೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.

ಜೆಡಿಎಸ್‌ನಿಂದ ಟಿಕೆಟ್ ಕೊಡಿಸುವ ಬಗ್ಗೆ ಸುಮಲತ ಅವರಲ್ಲಿ ಪ್ರಸ್ತಾಪಿಸಿದ್ದೇನೆ ಎಂಬ ತಮ್ಮಣ್ಣ ಅವರ ಮಾತುಗಳು ನೂರಕ್ಕೆ ನೂರರಷ್ಟು ಸುಳ್ಳು ಎಂದು ತಿಳಿಸಿದ್ದಾರೆ. ಸುಮಲತ ಅವರನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಆಸೆ ಇತ್ತು ಎಂದು ತಮ್ಮಣ್ಣ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಸುಮಲತ ಅವರು, ಇದು ಅಪ್ಪಟ ಸುಳ್ಳು ಎಂದು ತಳ್ಳಿಹಾಕಿದ್ದಾರೆ.

Leave a Comment