ನೆರೆ ಜನರ ಸಂಕಷ್ಟ ಮರೆತ ಕೇಂದ್ರ ಟೀಕೆ

ಬೆಂಗಳೂರು, ಸೆ. ೨೩- ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಸೇರಿದಂತೆ ಇತರೆ ಭಾಗಗಳಲ್ಲಿ ಪ್ರವಾಹ ಉಂಟಾಗಿ ಭಾರೀ ಪ್ರಮಾಣದ ನಷ್ಟ ಉಂಟಾಗಿದ್ದು, ನೆರೆ ಪರಿಹಾರ ನೀಡದೆ ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಸದಸ್ಯೆಯರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾನಿಗೀಡಾಗಿದ ಬೆಳೆಗಳನ್ನು ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಗೆ ಸ್ಪೀಡ್ ಪೋಸ್ಟ್ ಮಾಡುವ ಮೂಲಕ ನಗರದ ಜಿಪಿಓ ಕಚೇರಿ ಮುಂಭಾಗ ಮಹಿಳೆಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಡಾ. ಬಿ. ಪುಷ್ಪಅಮರ್‌ನಾಥ್ ಮಾತನಾಡಿ, ನೆರೆ, ಪ್ರವಾಹ ಉಂಟಾಗಿ ಬಹಳಷ್ಟು ದಿನಗಳು ಕಳೆದಿದ್ದರೂ ನೆರೆ ಹಾವಳಿಯಿಂದ ತೀವ್ರ ತೊಂದರೆ ಅನುಭವಿಸುತ್ತಿರುವ ಸಂತ್ರಸ್ಥರಿಗೆ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್‌ನ ಹಿರಿಯ ಮುಖಂಡರು, ಪದಾಧಿಕಾರಿಗಳು ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment