ನೆರೆ ಸಂತ್ರಸ್ತರ ಚೇತರಿಕೆಗೆ ಸಂತೋಷ್ ಪ್ರಾರ್ಥನೆ

ಹುಬ್ಬಳ್ಳಿ, ಆ 14: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ನೆರೆಯಿಂದ ಸಂತ್ರಸ್ತಗೊಂಡವರು ಆದಷ್ಟು ಬೇಗನೇ ಚೇತರಿಸಿಕೊಳ್ಳಲಿ ಎಂದು ವಿಶ್ವಮಾನ್ಯ ಪ್ರಶಸ್ತಿ ವಿಜೇತ, ಸಮಾಜ ಸೇವಕ ಸಂತೋಷ್ ಆರ್. ಶೆಟ್ಟಿ ಹೇಳಿದರು.

ನಗರದ ಬ್ಯಾಂಕರ್ಸ್ ಕಾಲೊನಿಯಲ್ಲಿ ಈಶ್ವರಿ ವಿಶ್ವವಿದ್ಯಾಲಯ ವತಿಯಿಂದ ಏಳು ದಿನಗಳ ಕಾಲ ಆಯೋಜಿಸಿರುವ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಪ್ರವಾಹದಿಂದಾಗಿ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿವೆ. ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ. ಅವರೆಲ್ಲರೂ ಆದಷ್ಟು ಬೇಗನೆ ಚೇತರಿಸಿಕೊಂಡು ಮತ್ತೆ ದೈನಂದಿನ ಜೀವನವನ್ನು ನಡೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ನಿರ್ಮಲಾದೇವಿ ಅಕ್ಕನವರು, ಬ್ರಹ್ಮಕುಮಾರಿ ಸುಮಾ ಅಕ್ಕನವರು ಸೇರಿದಂತೆ ಬ್ಯಾಂಕರ್ಸ್ ಕಾಲೊನಿ ಲಕ್ಷ್ಮೀ ನಗರ ನಿವಾಸಿಗಳು ಉಪಸ್ಥಿತರಿದ್ದರು.

Leave a Comment