ನೌಕರರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸಿ-ಎನ್ಎಸ್‌ಬಿ

ತಾಲೂಕು ಕನಕ ನೌಕರರ ಸಂಘ: ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ
ರಾಯಚೂರು.ಫೆ.16- ನೌಕರರು ನಿರ್ಭಿತಿಯಿಂದ ಕಾರ್ಯ ನಿರ್ವಹಿಸಲು ಸಂಘಟನಾನ್ಮಕ ಕಾರ್ಯದಲ್ಲಿ ಸಕ್ರೀಯರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್ ಬೋಸರಾಜ ಹೇಳಿದರು.
ನಗರದ ರಂಗ ಮಂದಿರದಲ್ಲಿ ತಾಲೂಕ ಕನಕ ನೌಕರರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರರು ನಿರ್ಭಿತಿಯಿಂದ ಕಾರ್ಯ ನಿರ್ವಹಿಸುವುದು ಕಷ್ಟ ಕರವಾಗುತ್ತಿದ್ದೆ, ಇತ್ತಿಚಿಗೆ ಜಿಲ್ಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶೂ ಮತ್ತು ಸಾಕ್ಸ್ ವಿತರಣೆಯಲ್ಲಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಎಡವಟ್ಟಿನಿಂದ 7 ಜನ ಶಿಕ್ಷಕರು ಅಮಾನತ್ತಾಗಿದ್ದು, ಅವರಲ್ಲದ ತಪ್ಪಿನಿಂದ ಇರುವ ಶಿಕ್ಷೆ ಅನುಭವಿಸುವಂತಾಗಿದೆ.
ನೌಕರಿಗೆ ಜನಪ್ರತಿನಿಧಿಗಳ ಮಾತು ಕೇಳುವ ಅನಿವಾರ್ಯತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಜಿಲ್ಲೆ ಶಿಕ್ಷಣದಲ್ಲಿ ಕೊನೆಯ ಸ್ಥಾನದಲ್ಲಿದ್ದರು, ಅಮಾನತ್ತು ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ನೌಕರರು ಪ್ರಾಮಾಣಿಕವಾಗಿ, ನಿರ್ಭಿತಿಯಿಂದ ಸಂವಿಧಾನ ಬದ್ಧವಾಗಿ, ಯೋಜನೆಗಳನ್ನು ಅರ್ಹಫಲಾನುಭವಿಗಳಿಗೆ ತಲುಪಿಸಬೇಕೆಂದರೆ ಸಂಘಟನಾನ್ಮಕ ಕಾರ್ಯದಲ್ಲಿ ಸಕ್ರೀಯರಾಗಬೇಕು. ಇಂದು ಕನಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮಗಳು ಮುಂದುವರೆಯಲಿ ಎಂದು ಶುಭ ಹಾರೈಸಿದರು.
ಗ್ರಾಮೀಣ ಶಾಸಕ ದದ್ದಲ್ ಬಸವನಗೌಡ ಮಾತನಾಡಿ, ಪ್ರತಿಭಾ ಪುಸ್ಕಾರ ಹಾಗೂ ಸನ್ಮಾನ ಸಮಾರಂಭ ಬಹಳ ವಿಶೇಷವಾಗಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುತ್ತದೆ ಎಂದರು. ಇದೆ ವೇಳೆ ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೌಕರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿಯ ಕನಕ ಗುರು ಪಿಠದ ಶ್ರೀ ಸಿದ್ಧರಾಮನಂದಪುರಿ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರಿಬಾಬು, ಜಿ.ಯು ಹುಡೇದ, ಚಿಂತಕ ಎಂ.ನಿಖಿತರಾಜ್, ವೆಂಕಟೇಶ ಜಾಲಿಬೆಂಚಿ, ಕಸ್ತೂರಮ್ಮ ಭೀರಪ್ಪ ಕಡದಿನ್ನಿ, ಮಹಾದೇವಪ್ಪ, ವಿರ್ಜಾಪೂರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Leave a Comment