ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಆಸ್ಪತ್ರೆಯಿಂದ ಮನೆಗೆ

ಬೆಂಗಳೂರು, ಮಾ. ೧೪-ಚಾಕು ಇರಿತಕ್ಕೆ ಒಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ವಿಶ್ವನಾಥ್‌ಶೆಟ್ಟಿ ಅವರು ಸಂಪೂರ್ಣ ಗುಣಮಖರಾಗಿ  ಇಂದು ಬೆಳಿಗ್ಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದು ಇನ್ನೂ ಅವರಿಗೆ ಒಂದು ತಿಂಗಳ ಕಾಲ ಚಿಕಿತ್ಸೆಯ ಅಗತ್ಯವಿದೆ.

ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಿದರು. ಮಲ್ಯ ಆಸ್ಪತ್ರೆಯಲ್ಲಿ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ಜತೆಗೆ ರಾಜ್ಯದ ಜನತೆಗೆ ಅಬಾರಿಯಾಗಿದ್ದೇನೆ. ಘಟನೆ ಕುರಿತು ಮಾತನಾಡುವುದಕ್ಕೆ ಸೂಕ್ತ ಸಮಯ ಅಲ್ಲ ಎಂದು ಹೇಳಿದರು.

ಮಾ. ೭ ರಂದು ಲೋಕಾಯುಕ್ತ ಕಚೇರಿಗೆ ದೂರು ನೀಡಲೆಂದು ಬಂದ ತೇಜಸ್ ರಾಜ್ ಶರ್ಮಾ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದ. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು.ಆರೋಪಿಯನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸಿದ್ದಾರೆ.

Leave a Comment