ಪತ್ನಿ-ಮಕ್ಕಳಿಗೆ ಟಾರ್ಚರ್ ಕೊಡ್ಬೇಡಿ: ರಮೇಶ್

ಬೆಂಗಳೂರು, ಅ ೧೨- ಮರ್ಯಾದೆಗೆ ಅಂಜಿ ನಾನು ಆತ್ಮಹತ್ಯೆಗೆ ಶರಣಾಗಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಟಾರ್ಚರ್ ಕೊಡಬೇಡಿ ಎಂದು ಡೆತ್ ನೋಟ್ ಬರೆದಿಟ್ಟು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೊನ್ನೆ ನನ್ನ ಮನೆಯಲ್ಲಿ ನಡೆದ ಐಟಿ ದಾಳಿಯಿಂದ ನಾನು ದಿಗ್ಭ್ರಾಂತನಾಗಿದ್ದೇನೆ. ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಬಡವರು ಬಡವರಾಗಿಯೇ ಉಳಿಯಬೇಕೆಂಬ ಸಂಸ್ಕೃತಿಯಿಂದ ತುಂಬಾ ಬೇಜಾರಾಗಿದ್ದೇನೆ. ಐಟಿ ಅಧಿಕಾರಿಗಳೇ ನನ್ನ ಹೆಂಡತಿ, ಮಕ್ಕಳಿಗೆ ತೊಂದರೆ ಕೊಡಬೇಡಿ ಎಂದು ರಮೇಶ್ ಡೆತ್ ನೋಟ್‍ನಲ್ಲಿ ಮನವಿ ಮಾಡಿದ್ದಾರೆ.
ಸೌಮ್ಯ ನನ್ನನ್ನು ಕ್ಷಮಿಸು, ಮಕ್ಕಳನ್ನು ಚೆನ್ನಾಗಿ ನೋಡಿಕೋ, ಲಕ್ಷ್ಮಿದೇವಿ, ಪದ್ಮಾ, ಸತೀಶ ನಿಮ್ಮೊಂದಿಗೆ ಹುಟ್ಟಿ ನಿಮಗೆ ಸಹಾಯ ಮಾಡಬೇಕೆಂಬ ನನ್ನ ಆಸೆ ಇಂದಿಗೆ ಕಮರಿದೆ. ನನ್ನ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡುತ್ತಿರುವ ವಿಎಸ್‍ಎಸ್ ವಿದ್ಯಾಸಂಸ್ಥೆಗೆ ಕೃತಜ್ಞನಾಗಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ನಿಮ್ಮನ್ನು ಸಾಕಬೇಕಿದ್ದ ನಾನು ಹೋಗುತ್ತಿದ್ದೇನೆ ಕ್ಷಮಿಸಿ ಎಂದು ತಮ್ಮ ಕುಟುಂಬಸ್ಥರಿಗೆ ಧನ್ಯವಾದ ಹಾಗೂ ಕ್ಷಮೆ ಕೇಳಿದ್ದಾರೆ.

Leave a Comment