ಪರಂ ಪರ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಹೆಜ್ಜೇನು ದಾಳಿ

ಕೊರಟಗೆರೆ – ಡಾ.ಜಿ. ಪರಮೇಶ್ವರ್‌ ಮೇಲೆ ಐಟಿ ದಾಳಿ ಖಂಡಿಸಿ ನಡೆಯುತ್ತಿದ್ದ ಕಾಂಗ್ರೆಸ್ ಪ್ರತಿಭಟನೆ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು 20ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ.
ಶನಿವಾರ ಕೊರಟಗೆರೆ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮತ್ತು ಬಂದ್‌ಗೆ ಕರೆ ನೀಡಿತ್ತು. ಅದರಂತೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದು ಕಂದಾಯ ಇಲಾಖೆ ಆವರಣದಲ್ಲಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸುವ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿದ ಎನ್ನಲಾಗಿದೆ.
20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಜ್ಜೇನು ಕಚ್ಚಿದ್ದು, ದಾಳಿಯಿಂದ ಪಾರಾಗುವ ಭರದಲ್ಲಿ ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ ಅಂತ ತಿಳಿದು ಬಂದಿದೆ.

Leave a Comment