ಪರಿಶೀಲನೆ

ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಇಂದು ಕರ್ನಾಟಕ ಸರ್ಕಾರದ ಉದ್ದಿಮೆಯಾದ ಹುಬ್ಬಳ್ಳಿಯ ಎನ್.ಜಿ.ಈ.ಎಫ್ ಲಿಮಿಟೆಡ್ ನ ರಾಯಾಪುರದ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ‌ಉದ್ದಿಮೆಯ ಅಭಿವೃದ್ಧಿ ಹಾಗೂ ಸಾಧನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಮಾರ್ಗದರ್ಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಎನ್.ಜಿ.ಈ.ಎಫ್ ವ್ಯವಸ್ಥಾಪಕ ನಿರ್ದೇಶಕ ಕಿರಣ್ ಆರ್ ಅಡವಿ ಸೇರಿದಂತೆ ಇತರರು ಇದ್ದರು.

Leave a Comment