ಪರಿಷತ್ ಚುನಾವಣೆ ಕಾಂಗ್ರೆಸ್‌ನ ಸುನಿಲ್ ಗೆಲುವು

ವಿಜಯಪುರ, ಸೆ. ೧೧- ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಂದ ವಿಧಾನ ಪರಿಷತ್‌ಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಅವರಿಗೆ ಜೆಡಿಎಸ್ ಬೆಂಬಲ ನೀಡಿತ್ತು. ಅಲ್ಲದೆ, ಈ ಚುನಾವಣೆ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ಎಂ.ಬಿ. ಪಾಟೀಲ್ ನಡುವಿನ ತೀವ್ರ ಹಣಾಹಣಿ ಎಂದೇ ಬಿಂಬಿತವಾಗಿತ್ತು.

ಇಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ 4,819 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬಿಜೆಪಿ ಅಭ್ಯರ್ಥಿ 2,779 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಮಾಜಿ ಸಚಿವ ಎಂ.ಬಿ. ಪಾಟೀಲ್ ತಮ್ಮ ಸಹೋದರ ಸುನಿಲ್ ಗೌಡ ಪಾಟೀಲ್ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ತಾವೇ ಕಿಂಗ್ ಮೇಕರ್ ಎನ್ನುವುದನ್ನು ನಿರೂಪಿಸಿದ್ದಾರೆ.

Leave a Comment