ಪಶು ವೈದ್ಯೆ ಅತ್ಯಾಚಾರ: ಕಿಚ್ಚ ಸುದೀಪ್ ಆಕ್ರೋಶ

ತೆಲಂಗಾಣ ಪಶು ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ವಿರೋಧಿಸಿ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂತಹ ಕಾಮುಕರನ್ನು ಮಟ್ಟಹಾಕಲು ಕಠಿಣ ಕ್ರಮ ಜಾರಿಯಾಗಬೇಕೆಂದು ಎಲ್ಲರು ಒತ್ತಾಯ ಮಾಡುತ್ತಿದ್ದಾರೆ. 26 ವರ್ಷದ ಪಶು ವೈದ್ಯೆ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಮಯದಲ್ಲಿ ಕಾಮುಕರು ಆಕೆಯ ಮೇಲೆ ಅತ್ಯಾಚಾರ ವೆಸಗಿ, ಜೀವಂತವಾಗಿ ಸುಟ್ಟುಹಾಕಿದ್ದಾರೆ.

ಇಂತಹ ಘಟನೆಗಳು ಪದೇ ಪದೇ ನಡೆಯುತ್ತಲೆ ಇದೆ. ಇದಕ್ಕೆ ಕೊನೆಯನ್ನೊದೆ ಇಲ್ಲವಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಕಲಾವಿದರು ಸಹ ಈ ಘಟನೆಯನ್ನು ಖಂಡಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಾಲಿವುಡ್, ಟಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ಭಾಷೆಯ ಕಲಾವಿದರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಈಗ ಕಿಚ್ಚ ಸುದೀಪ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಕಾನೂನಿನ ಬಗ್ಗೆ ಭಯವಿಲ್ಲದಿದ್ದರೆ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುತ್ತವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ದಬಾಂಗ್-3 ಚಿತ್ರದ ಪ್ರಮೋಷನ್ ವೇಳೆ ಸುದೀಪ್ ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ್ದಾರೆ.

Leave a Comment