ಪಾಂಡ್ಯ, ರಾಹುಲ್‌ಗೆ ಬಿಸಿಸಿಐ ನೋಟಿಸ್

ಮುಂಬೈ, ಜ ೯- ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಮಹಿಳೆಯರ ಬ್ಗಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ವಿರುದ್ಧ ಬಿಸಿಸಿಐ ಶೋಕಾಸ್ ನೋಟಿಸ್ ಜಾರಿ ಮಾಡಿದೆ.   ಈ ಇಬ್ಬರು ೨೪ ಗಂಟೆಯೊಳಗೆ ಬಿಸಿಸಿಐಗೆ ವಿವರಣೆ ನೀಡಬೇಕೆಂದು ಮುಖ್ಯಸ್ಥ ವಿನೋಧ್ ರಾಯ್ ಅವರು ಸೂಚನೆ ನೀಡಿದ್ದಾರೆ. ಅಲ್ಲದೇ ಕ್ರಿಕೆಟ್ ಹೊರತು ಪಡಿಸಿ ಈ ಆಟಗಾರರಿಗೆ ಯಾವುದೇ ಖಾಸಗಿ ಸಂದರ್ಶನದಲ್ಲಿ ಭಾಗವಹಿಸದಂತೆ ನಿರ್ಭಂದ ಹೇರಿ ಎಚ್ಚರಿಸಿದೆ.

ಕ್ಷಮೆ ಕೋರಿದ ಪಾಂಡ್ಯ

ಬಾಲಿವುಡ್‌ನ ಪ್ರಸಿದ್ದ ಕಾಫಿ ವಿತ್ ಕರಣ್- ಸೆಲೆಬ್ರಿಟಿ ಚಾಟ್ ಶೋದಲ್ಲಿ ಮಹಿಳೆಯರ ಬಗ್ಗೆ ಕೆಟ್ಟ ಪದ ಬಳಕೆ ಮಾಡಿರುವ ಭಾರತೀಯ ಆಲರೌಂಡರ್ ಹಾರ್ದಿಕ್ ಪಾಂಡ್ಯ ಭಾರಿ ಟೀಕೆಗೆ ಒಳಗಾಗಿದ್ದಾರೆ. ಇದಾದ ಬೆನ್ನಲ್ಲೇ ಪಾಂಡ್ಯ ಕ್ಷಮಾಪಣೆ ಕೇಳಿದ್ದಾರೆ. ಕಾರ್ಯಕ್ರಮದಲ್ಲಿ ಪಾಂಡ್ಯ ಅನೇಕ ಹೆಣ್ಮಕ್ಕಳ ಸಂಗವನ್ನು ತಾವು ಇಷ್ಟಪಡುವುದಾಗಿ ಈ ಬಗ್ಗೆ ಹೆಮ್ಮೆಪಟ್ಟುಕೊಂಡು ಹೆತ್ತವರಲ್ಲಿ ತೆರೆದ ಮುಖದಿಂದಲೇ ಮಾತನಾಡುವುದಾಗಿ ಅವರು ಹೇಳಿಕೊಂಡಿದ್ದರು.  ಅವರ ನಡೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಹಲವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡು ಹಾರ್ದಿಕ್ ಪಾಂಡ್ಯ ವಿರುದ್ಧ ಟೀಕೆ ಮಾಡಿದ್ದರು. ತಮ್ಮ ಮಾತಿನ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದಂತೆ ಎಚ್ಚೆತ್ತುಕೊಂಡಿರುವ ಹಾರ್ದಿಕ್ ಪಾಂಡ್ಯ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ನನ್ನ ಮಾತುಗಳು ಯಾರಿಗಾದರೂ ನೋವುಂಟು ಮಾಡಿದ್ದರೆ, ಅಂತಹವರಲ್ಲಿ ಕ್ಷಮೆ ಕೋರುತ್ತೇನೆ. ನನ್ನ ಮಾತಿನಲ್ಲಿ ಯಾರ ಮನಸ್ಸಿಗೂ ನೋವುಂಟು ಮಾಡುವ ಅಥವಾ ಯಾರಿಗೂ ಅಗೌರವ ತೋರುವ ಉದ್ದೇಶ ಇರಲಿಲ್ಲ ಎಂದು ತಿಳಿಸಿದ್ದಾರೆ.

ಸಚಿನ್ ಹಾಗೂ ಕೊಹ್ಲಿ ಇಬ್ಬರಲ್ಲಿ ಯಾರು ಬೆಟರ್ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಹಾರ್ದಿಕ್ ಹಾಗೂ ಕೆಎಲ್ ರಾಹುಲ್ ಇಂದು ಮುಂದು ನೋಡದೇ ಕೊಹ್ಲಿ ಎಂದು ಉತ್ತರಿಸಿದ್ದರು. ಅಲ್ಲದೇ ಮಹಿಳೆಯರು ಹಾಗೂ ಸೆಕ್ಸ್ ಜೀವನದ ಬಗ್ಗೆ ಕೇಳಿದ ಪ್ರಶ್ನೆಯ ಬಗ್ಗೆ ಕ್ಷಣ ಕಾಲ ಕೂಡ ಯೋಚಿಸದೆ ಹಾರ್ದಿಕ್ ಉತ್ತರಿಸಿದ್ದರು. ಇದರಿಂದ ಹಲವು ಕ್ರಿಕೆಟ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹಾರ್ದಿಕ್ ವಿರುದ್ಧ ಟೀಕೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

Leave a Comment