ಪಾರ್ವತಮ್ಮ ರಾಜ್‌ಕುಮಾರ್ ಸ್ಥಿತಿ ಗಂಭೀರ

ಬೆಂಗಳೂರು, ಮೇ ೧೮- ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ರವರ ಪರಿಸ್ಥಿತಿ ಚಿಂತಾಜನಕವಾಗಿದೆ.
ದೀರ್ಘಾಕಾಲದಿಂದ ಅನಾರೋಗ್ಯದಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್‌ಕುಮಾರವನ್ನು ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ 3 ದಿನಗಳ ಹಿಂದೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದೆ. ಹೀಗಾಗಿ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪುತ್ರ ಶಿವರಾಜ್‌ಕುಮಾರ ಪ್ರತಿಕ್ರಿಯಿಸಿ ಅಮ್ಮ ಐಸಿಯುನಲ್ಲಿರುವುದರಿಂದ ಅವರನ್ನು ಮಾತನಾಡಿಸಲು ಆಗಿಲ್ಲ. ವೈದ್ಯರು ಎಲ್ಲ ರೀತಿಯ ಪ್ರಯತ್ನ ಮುಂದುವರಿಸಿದ್ದು ನಿನ್ನೆಗಿಂತ ಇಂದು ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ ಎಂದು ಹೇಳಿದ್ದಾರೆ.
ಪಾರ್ವತಮ್ಮ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯ ಮಧ್ಯಾಹ್ನ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಪುತ್ರಿಯರಾದ ಲಕ್ಷ್ಮಿ, ಪೂರ್ಣಿಮಾ, ಅಳಿಯಂದಿರರಾದ ಗೋವಿಂದ ರಾಜ್, ರಾಮ್ ಕುಮಾರ್, ಶಿವರಾಜ್ ಕುಮಾರ್ ಪುತ್ರಿ ನಿರುಪಮ್, ಅಳಿಯ ದಿಲೀಪ್, ರಾಜ್ ಕುಟುಂಬದ ಸೊಸೆಯಂದಿರರಾದ ಗೀತಾ, ಮಂಗಳ, ಅಶ್ವಿನಿ ಸೇರಿದಂತೆ ಇಡೀ ಕುಟುಂಬ ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸಿದರು.
ಘಟನೆಯ ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಗೃಹ ಸಚಿವರ ಸಲಹೆಗಾರರ ಕೆಂಪಯ್ಯ ಸೇರಿದಂತೆ ಅನೇಕರು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆಯ ಆವರಣದ ಭಾರಿ ಬಿಗಿಬಂದೋಬಸ್ತ್ ಕಲ್ಪಿಸಿದ್ದಾರೆ.
ಆಸ್ಪತ್ರೆಗೆ ನಿರ್ದೇಶಕ ಗುರುದತ್, ಚಲನಚಿತ್ರ ವಾಣಿಜ್ಯ ಮಂಡಳಿಯ ಸಾರಾ ಗೋವಿಂದು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಭೇಟಿ ನೀಡಿದ್ದಾರೆ.
ಚಿತ್ರರಂಗದ ಪಾಲಿಗೆ ಅಮ್ಮ ಎಂದೇ ಗುರುತಿಸಿಕೊಂಡಿದ್ದರು. ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಎಸ್ ರಾಮಯ್ಯ ಭೇಟಿ ನೀಡಿ ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದ್ದರು.

Leave a Comment