ಪಿಒಕೆಯಲ್ಲಿ ಪಾಕ್ ವಿರುದ್ಧ ಪ್ರತಿಭಟನೆ: ಲಾಠಿ ಚಾರ್ಜ್ ನಲ್ಲಿ ಇಬ್ಬರ ಸಾವು

 

ಶ್ರೀನಗರ, ಅ.22 ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಪಾಕಿಸ್ತಾನದ ಅಕ್ರಮ ಆಕ್ರಮಣವನ್ನು ವಿರೋಧಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಇಬ್ಬರು ಮೃತರಾಗಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠಿಚಾರ್ಜ್ ನಲ್ಲಿ ಇಬ್ಬರು ಮೃತರಾಗಿದ್ದು, ಪಾಕಿಸ್ತಾನದ ವಿರುದ್ಧ ಘೋಷಣೆಗಳು ಕೇಳಿಬಂದವು.
ಒಂದೆಡೆ ಅಂತಾರಾಷ್ಟ್ರೀಯ ನಾಯಕರು ಕಾಶ್ಮೀರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಬೇಕು ಎಂದು ಬೊಬ್ಬೆ ಇಡುವ ಪಾಕಿಸ್ತಾನ, ಇತ್ತ ತಾನೇ ಕದನ ವಿರಾಮ ಉಲ್ಲಂಘಿಸಿ, ಪಿಒಕೆಯಲ್ಲಿ ಶಾಂತಿ ಕದಡುತ್ತಿದೆ ಎಂದು ಪ್ರತಿಭಟನಕಾರರು ದೂರಿದ್ದಾರೆ.
ಪಿಒಕೆ ಮೂಲಕ ಭಾರತಕ್ಕೆ ಉಗ್ರರು ನುಸುಳುತ್ತಿದ್ದು ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಮದು ಪ್ರತಿಭಟನಕಾರರು ಆಕ್ರೋಶ ವುಕ್ತಪಡಿಸಿದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ಆಗಸ್ಟ್ 5 ರಂದು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಶಾಂತಿ ಕದಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ ಎಂಬ ದೂರು ಕೇಳಿಬರುತ್ತಿದೆ.

Leave a Comment