ಪುಲ್ವಾಮಾ ದಾಳಿಯ ಹುತಾತ್ಮ ಯೋಧನಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಒಡಿಶಾ ಸಿಎಂ

ಭುವನೇಶ್ವರ, ಜೂ 19 – ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಯೋಧನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ.
ಇಲ್ಲಿನ ಧೇನ್ಕನಲ್ ಜಿಲ್ಲೆಯ ಬಡಾಸುಯಲ್ ಗ್ರಾಮದ ಸಾಹು ಎಂಬುವರು ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದರು.
ಹುತಾತ್ಮ ಯೋಧನ ಕುಟುಂಬಕ್ಕೆ ಧೈರ್ಯ ತುಂಬಿರುವ ಪಟ್ನಾಯಕ್, ಯೋಧನ ಸಾವಿಗೆ ಸಂತಾಪ ಸೂಚಿಸಿದ್ದಾರೆ. ದೇಶದ ಭದ್ರತೆ ಹಾಗೂ ಸುರಕ್ಷತೆಗಾಗಿ ಜೀವವನ್ನೇ ಬಲಿಕೊಟ್ಟ ಯೋಧನ ತ್ಯಾಗ ಮರೆಯಲಾಗದು ಎಂದಿದ್ದಾರೆ.

Leave a Comment