ಪೂಜಾರಿ, ಶರೀಫ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು

ಬೆಂಗಳೂರು, ಫೆ. ೧೭ – ಪಕ್ಷದ ಶಿಸ್ತು ಉಲ್ಲಂಘಿಸ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಟು ಟೀಕೆಗಳನ್ನು ಮಾಡಿದ್ದ ಪಕ್ಷದ ಹಿರಿಯ ಮುಖಂಡರಾದ ಜನಾರ್ಧನ ಪೂಜಾರಿ ಹಾಗೂ ಜಾಫರ್ ಶರೀಫ್ ವಿರುದ್ಧ ಕೊನೆಗೂ ಶಿಸ್ತು ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಈ ಇಬ್ಬರೂ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪ್ರದೇಶ ಕಾಂಗ್ರೆಸ್ ವರಿಷ್ಠರಿಗೆ ಶಿಫಾರಸ್ಸು ಮಾಡಿದೆ.
ಪಕ್ಷದ ಹಿರಿಯ ನಾಯಕರುಗಳಾದ ಜನಾರ್ಧನ ಪೂಜಾರಿ ಹಾಗೂ ಜಾಫರ್ ಶರೀಫ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮನಬಂದಂತೆ ಟೀಕೆಗಳನ್ನು ಮಾಡುತ್ತಿದ್ದು, ಇವರುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಎಐಸಿಸಿಗೆ ಶಿಫಾರಸ್ಸು ಮಾಡಿದ್ದಾರೆ.
ಪಕ್ಷದ ನಾಯಕತ್ವದ ವಿರುದ್ಧ ಟೀಕೆಗಳನ್ನು ಮಾಡಿದ್ದ ಮಾಜಿ ಸಂಸದ ಎಚ್. ವಿಶ್ವನಾಥ್ ಅವರಿಗೆ ಕೆಪಿಸಿಸಿ ಈಗಾಗಲೇ ಷೋಕಾಸ್ ನೋಟಿಸ್ ಜಾರಿ ಮಾಡಿದೆ.
ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಈ ಮೂವರು ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕಳೆದ ವಾರ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಶಾಸಕರು ಈ ನಾಯಕರುಗಳ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಕೊನೆಗೂ ಕೆಪಿಸಿಸಿ ಒತ್ತಡ‌ಕ್ಕೆ ಮಣಿದು ಈ ಹಿರಿಯ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ.

Leave a Comment