ಪೆಟ್ರೋಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ,ಸೆ.9-ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ಅದನ್ನು ತಡೆದರು.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಈರಣ್ಣ ಪಾಟೀಲ ಝಳಕಿ, ಶಿವಾನಂದ ಹೊನಗುಂಟಿ, ಮಜರ್ ಆಲಂಖಾನ್, ಪ್ರವೀಣ ಪಾಟೀಲ ಹರವಾಳ, ಫಾರುಕ್ ಮಾನಿಯಾಲ್, ಡಾ.ಕಿರಣ್ ದೇಶಮುಖ, ಓವೈಸ್ ಶೇಖ್, ಖುಸ್ರೋ ಜಹಗಿರದಾರ, ಸಂದೇಶ ಕಮಕನೂರ, ಬಸು, ಪ್ರಶಾಂತ ಪಾಟೀಲ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Comment