ಪೊಲೀಸರಿಂದಲೇ ಯುವತಿ ಮೇಲೆ ಅತ್ಯಾಚಾರ

ಗೋರಖ್ಪುರ, ಫೆ .16- ಯುವತಿಯೊಬ್ಬಳನ್ನು ಬಲವಂತದಿಂದ ಹೋಟೆಲ್‌ಗೆ ಕರೆದೊಯ್ದ ಅನಾಮಿಕ ಪೋಲಿಸರು ಆಕೆ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಗೋರಖ್ಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಪೊಲೀಸರು ಈವರೆಗೆ ಯಾರನ್ನೂ ಬಂಧಿಸದ ಕಾರಣ ಪ್ರತಿಪಕ್ಷ ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಪೂರ್ವಾಂಚಲ್ ಸೇನಾ ಪಕ್ಷಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂದೆ ಧರಣಿ ನಡೆಸಿ, ಗೋರಖ್ ನಾಥ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾ ಎಸ್ಪಿ ಮಾತನಾಡಿ, ಅತ್ಯಾಚಾರ ಸಂತ್ರಸ್ತೆ ಪ್ರಸ್ತುತ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪರಿಚಿತ ಇಬ್ಬರು ಪೊಲೀಸರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ಘಟನೆ ನಡೆದ ಹೋಟೆಲ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿ, ಹೋಟೆಲ್ ಭದ್ರತಾ ಸಿಬ್ಬಂದಿ ಹೇಳಿಕೆಯನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಪ್ರಕಾರ, ವ್ಯಕ್ತಿಯೊಬ್ಬರನ್ನು ಭೇಟಿಯಾಗಲು ಆಕೆ ಹೋಟೆಲ್ ಬಳಿ ಹೋಗಿದ್ದಳು. ಅಲ್ಲಿದ್ದ ಇಬ್ಬರು ಪೊಲೀಸರು ಆಕೆಯನ್ನು ವ್ಯಭಿಚಾರಿಣಿಯೆಂದು ಭಾವಿಸಿ ವಿಚಾರಣೆ ನಡೆಸುವುದಾಗಿ ಹೇಳಿ ಆಕೆಯನ್ನು ಬಲವಂತವಾಗಿ ಹೋಟೆಲ್ ಕೊಠಡಿಯೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿ, ನಂತರ ಮನೆಗೆ ಹೋಗುವಂತೆ ಹೇಳಿದರು. ತನ್ನ ಮೇಲೆ ಅತ್ಯಾಚಾರ ಎಸಗಿದ ಪೊಲೀಸರನ್ನು ಗುರುತಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಮನೆಯಲ್ಲಿ ಮಕ್ಕಳಿಗೆ ಕೋಚಿಂಗ್ ತರಗತಿಗಳನ್ನು ನಡೆಸುವ ಈ ಯುವತಿಯ ತಂದೆ ಕೂಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ,

Leave a Comment