ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರ ಚಕಮಕಿ

ಹುಬ್ಬಳ್ಳಿ,ಜೂ 19- ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿಯವರು ಇಂದು ಮುಂಜಾನೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರ ಸ್ವಾಗತಕ್ಕೆ ಅವಕಾಶ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆಯಿತು.
ಇದರಿಂದ ಕೆಲಕಾಲ ವಿಮಾನ ನಿಲ್ದಾಣದಲ್ಲಿ ಗೊಂದಲದ ವಾತಾವರಣ ಕಂಡು ಬಂದಿತು.ನಂತರ ಬಿಜೆಪಿ ಮುಖಂಡ ಮಹೇಶ ಟೆಂಗಿನಕಾಯಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Leave a Comment