ಪೊಲೀಸ್ ಅಧಿಕಾರಿಗಳ ಜತೆ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು, ಫೆ. ೨೩- ಮೂವರು ವಿದ್ಯಾರ್ಥಿನಿಯರ ಪಾಕ್ ಪರ ಘೋಷಣೆ ಬೆನ್ನಲ್ಲೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ನಿರ್ಣಯಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದೆ.
ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಾ, ಆರ್ಧ್ರಾ ಹಾಗೂ ಮೈಸೂರಿನಲ್ಲಿ ಸಿಎ‌ಎ ವಿರೋಧ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಹಾಗೂ ಇಂತಹ ಪ್ರಕರಣಗಳನ್ನು ಹೇಗೆ ಮಟ್ಟ ಹಾಕಬೇಕೆನ್ನುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಡಿಜಿ ಪ್ರವೀಣ್ ಸೂದ್ ಗುಪ್ತದಳ, ಎಡಿಜಿ ಕಮಲ್‌ಪಂತ್, ಪೊಲೀಸ್ ಆಯುಕ್ತ ಭಾಸ್ಕರ್‌ರಾವ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಸಲೀಂ ಪ್ರತಾಪ್ ರೆಡ್ಡಿ ಇನ್ನಿತರರು ಹಾಜರಿದ್ದರು.

Leave a Comment