ಪೌರಕಾರ್ಮಿಕರ ನೇಮಕಾತಿ ಸಿಎಂ ಜತೆ ಚರ್ಚಿಸಿ ನಿರ್ಧಾರ

ಬೆಂಗಳೂರು, ಸೆ.೧-ಪೌರ ಕಾರ್ಮಿಕರ ನೇಮಕಾತಿ ಸಂಬಂಧ ಮುಖ್ಯ ಮಂತ್ರಿಗಳೊಂದಿಗೆ ತ್ವರಿತವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮೇಯರ್ ಆರ್.ಸಂಪತ್ ರಾಜ್ ತಿಳಿಸಿದ್ದಾರೆ. ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಆಯೋಜಿಸಿದ್ದ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಿಬಿಎಂಪಿ ಪೌರ ಕಾರ್ಮಿಕ ನೇಮಕಾತಿ, ಇತರೆ ಸೌಲಭ್ಯಗಳ ಬಗ್ಗೆ ಈಗಾಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಪಾಲಿಕೆ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಮಾತನಾಡಿ, ಅಂಬೇಡ್ಕರ್ ಅವರ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿ ಎಲ್ಲರೂ ಕರ್ತವ್ಯ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಶೀಘ್ರ ನೇಮಕ: ಪ್ರಸ್ತುತ ಸಾಲಿನಲ್ಲಿಯೇ ನಾಲ್ಕು ಸಾವಿರ ಪೌರ ಕಾರ್ಮಿಕರ ನ್ನು ಖಾಯಂ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಕಾರ್ಯೋನ್ಮುಖವಾಗಿದ್ದೇವೆ ಎಂದರು.

ಬೃಹತ್ ಮೆರವಣಿಗೆ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಾವಿರಾರು, ಕಾರ್ಮಿಕರು, ನಗರದ ಪುರಭವನದಿಂದ ಬಿಬಿಎಂಪಿ ಕೇಂದ್ರ ಕಚೇರಿವರೆಗೂ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ೩೨೪ ಪೌರ ಕಾರ್ಮಿಕರಿಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಆಡಳಿತ ಪಕ್ಷದ ಎನ್.ಶಿವರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ವಿಶೇಷ ಆಯುಕ್ತರಾದ ಮನುಜ್ ಮೀನಾ, ಸರ್ಫರಾಜ್ ಖಾನ್ ಸೇರಿದಂತೆ ಪ್ರಮುಖರಿದ್ದರು.

Leave a Comment