ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರೀಯ ಸಮಾವೇಶ: ಬಿಗಿ ಪೊಲೀಸ್ ಬಂದೋಬಸ್ತ್

 

ಕಲಬುರಗಿ,ಜ.21-ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ ವಿರೋಧಿಸಿ ನಗರದ ಹಾಗರಗಾ ಕ್ರಾಸ್ ನ ಪೀರ್ ಬಂಗಾಲಿ ಮೈದಾನದಲ್ಲಿ ಕರ್ನಾಟಕ ಪೀಪಲ್ಸ್  ಫೋರಂ ಸಂಘಟನೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ರಾಷ್ಟ್ರೀಯ ಸಮಾವೇಶ ನಡೆಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಸಮಾವೇಶ ನಡೆಯುವ ಸ್ಥಳದಲ್ಲಿ ಈಗಾಗಲೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ರಾಷ್ಟ್ರೀಯ ನಾಯಕ ಸೀತಾರಾಮ ಯಚೂರಿ, ಸಿಪಿಐ ನಾಯಕ ಅತುಲ್ ಕುಮಾರ ಅಂಜನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರರ ಪ್ರಮುಖ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಮಾವೇಶದ ಸಂಚಾಲಕ ಮಾರುತಿ ಮಾನ್ಪಡೆ ತಿಳಿಸಿದ್ದಾರೆ.

ಸಮಾವೇಶದಲ್ಲಿ ಸಹಸ್ರಾರು ಜನ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಜನತೆ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕಳದಳ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದೆ.

 

Leave a Comment