ಪ್ರಕರಣ ರದ್ದತಿಗೆ ರೆಡ್ಡಿ ಕೋರ್ಟ್‌ಗೆ ಮನವಿ

ಬೆಂಗಳೂರು, ನ. ೯- ಆಂಬಿ‌ಡೆಂಟ್ ಕಂಪೆನಿಯ ವಂಚನೆ ಪ್ರಕರಣದಲ್ಲಿ ಭಾಗಿಯಾಗಿ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ತನಿಖಾಧಿಕಾರಿಗಳನ್ನು ಬದಲಾಯಿಸುವಂತೆ ಕೋರಿ ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆಂಬಿ‌ಡೆಂಟ್ ಕಂಪೆನಿಯ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಮಾಜಿ ಸಚಿವ ಜನಾರ್ಧನರೆಡ್ಡಿ ಅವರ ಬಂಧನಕ್ಕೆ ಸಿಸಿಬಿ, ಜನಾರ್ಧನರೆಡ್ಡಿ ಪತ್ತೆ ಕಾರ್ಯ ಮುಂದುವರೆಸಿರುವಾಗಲೇ, ಇಂದು ರಾಜ್ಯ ಹೈಕೋರ್ಟ್‌ನಲ್ಲಿ ಈ ಪ್ರಕರಣದ ತನಿಖಾಧಿಕಾರಿಗಳಾದ ಸಿಸಿಬಿಯ ಡಿಸಿಪಿ ಗಿರೀಶ್ ಮತ್ತು ಎಸಿಪಿ ವೆಂಕಟೇಶಪ್ರಸನ್ನ ಅವರನ್ನು ಬದಲಾಯಿಸುವಂತೆ ಅರ್ಜಿ ಸಲ್ಲಿಸಿರುವ ಜನಾರ್ಧನರೆಡ್ಡಿ, ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಮೊಕದ್ದಮೆಯನ್ನು ರದ್ದುಗೊಳಿಸುವಂತೆಯೂ ಮನವಿ ಮಾಡಿದ್ದಾರೆ.

ಆಂಬಿ‌ಡೆಂಟ್ ಕಂಪೆನಿ ವಂಚನೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ತನಿಖಾಧಿಕಾರಿಗಳಾದ ಸಿಸಿಬಿ ಗಿರೀಶ್ ಮತ್ತು ಎಸಿಪಿ ವೆಂಕಟೇಶಪ್ರಸನ್ನ ಈಗಾಗಲೇ ಪ್ರಕರಣದಲ್ಲಿ ಬಂಧಿಸಿರುವವರಿಗೆ ಒತ್ತಡ ಹೇರಿದ್ದಾರೆ ಎಂದು ರೆಡ್ಡಿ ಪರ ವಕೀಲ ಆರ್.ಸಿ.ಚಂದ್ರಶೇಖರ್ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.

ಈ ಆಂಬಿ‌ಡೆಂಟ್ ವಂಚನೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನದ ಭೀತಿ ಎದುರಿಸುತ್ತಿರುವ ಜನಾರ್ಧನರೆಡ್ಡಿ ಅವರು ಈಗಾಗಲೇ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಆಂಬಿ‌ಡೆಂಟ್ ಕಂಪೆನಿ ವಂಚನೆ ಪ್ರಕರಣ ಬಯಲಿಗೆ ಬರುಪತ್ತಿದ್ದಂತೆಯೇ ಜನಾರ್ಧನರೆಡ್ಡಿ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ರೆಡ್ಡಿ ಬಂಧಿನಕ್ಕಾಗಿ ಕಳೆದ 2-3 ದಿನಗಳಿಂದ ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.

Leave a Comment