ಪ್ರಚೋದನಕಾರಿ ಭಾಷಣ: ವಾರೀಸ್ ಪಠಾಣ್ ಗೆ ನೋಟೀಸ್

ಕಲಬುರಗಿ,ಫೆ.23-ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಫೆ.15 ರಂದು ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಯೋಜಿಸಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಮಹಾರಾಷ್ಟ್ರದ ಮಾಜಿ ಶಾಸಕ ಹಾಗೂ ಎ.ಐ.ಎಂ.ಐ.ಎಂ.ವಕ್ತಾರ ವಾರೀಸ್ ಯುಸೂಫ್ ಪಠಾಣ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗುವುದು ಎಂದು ನಗರ ಉಪ ಪೊಲೀಸ್ ಆಯುಕ್ತ ಡಿ.ಕಿಶೋರ್ ಬಾಬು ತಿಳಿಸಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ವಾರೀಸ್ ಪಠಾಣ್ ಅವರು ಪ್ರಚೋದನಕಾರಿ ಭಾಷಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಶ್ವೇತಾ ಓಂಪ್ರಕಾಶ್ ರಾಠೋಡ್ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಭಾಷಣದ ವಿಡಿಯೋ ಇತ್ಯಾದಿಗಳನ್ನು ಪರಿಶೀಲಿಸಲಾಗುತ್ತಿದ್ದು, ತನಿಖೆಯ ಮುಂದಿನ ಹಂತವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಕಿಶೋರಬಾಬು ತಿಳಿಸಿದ್ದಾರೆ..

Leave a Comment