ಪ್ರತಿಭಟನೆ

ಫೋಟೋ ಇದೆ

ಬಾಗಲಕೋಟ,ಸೆ 10-ಪೆಟ್ರೋಲ್ ಡಿಸೇಲ್ ಸೇರಿದಂತೆ ಇಂಧನ ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.ಭಾರತ ಬಂದ್ ಹಿನ್ನಲೆಯಲ್ಲಿ ಜಿಲ್ಲೆ ಯ ಶಾಲಾ ಕಾಲೇಜಗಳಿಗೆ  ರಜೆ ನೀಡಲಾಗಿದೆ.
ನಗರದ ಬಸವೇಶ್ವರ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯವರು ಟಂಟಂ ಗಾಡಿಯನ್ನು ಟಾಂಗಾಕ್ಕೆ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.ಎತ್ತಿನ ಗಾಡಿಯಲ್ಲಿ ಹತ್ತಿ ಪ್ರತಿಭಟನೆ ನಡೆಸಿದ ಹೋರಾಟಗಾರರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ‌ ನಗರದ ಬಸವೇಶ್ವರ ವೃತ್ತದಲ್ಲಿ ಮೋದಿವರ ಪ್ರತಿಕೃತಿಯನ್ನು ಹಿಡಿದುಕೊಂಡು ಕತ್ತೆಯ ಮೇಲೆ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಕೂಡಲೇ ಇಂಧನ ಬೆಲೆ ಇಳಿಸಬೇಕು.ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ಆರ್.ಡಿ.ಬಾಬು ಹೇಳಿದರು.

ಪೆಟ್ರೋಲ್ ,ಡಿಸೇಲ್ ಬೆಲೆ ಗಗನಕ್ಕೆ ಏರುತ್ತಿದ್ದು ಜನಸಾಮಾನ್ಯರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದರು.
ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.ಕಿಡಿಗೇಡಿಗಳಿಂದ ಬಸ್ ಗಳಿಗೆ ಹಾನಿಯಾಗಬಾರದು ಎಂದು ಮುಂಜಾಗೃತ ಕ್ರಮವಾಗಿ ಕೆ.ಎಸ್.ಆರ್.ಟಿ ಸಿಯವರು ಬೆಳಗ್ಗೆ ೬ ಗಂಟೆಯಿಂದ ಸಂಜೆ ೬ ಗಂಟೆಯವರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.
ನಗರದಲ್ಲಿ ಅಲ್ಲಲ್ಲಿ ಅಂಗಡಿ ಮುಗ್ಗಟ್ಟು ತೆರೆದಿದ್ದನ್ನು ಬಿಟ್ಟರೆ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಇನ್ನೂ ಬಂದ್ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಭಾರತ ಬಂದ್ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

Leave a Comment