ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ

ಪಿರಿಯಾಪಟ್ಟಣ: ಆ.25- ವಿದ್ಯಾರ್ಥಿಗಳಲ್ಲಿನ ಸಾಂಸ್ಕೃತಿಕ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಎಂದು ಬಿಇಒ ಚಿಕ್ಕಸ್ವಾಮಿ ಹೇಳಿದರು.
ತಾಲೂಕಿನ ಆಯಿತನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಹಿಟ್ನೆಹೆಬ್ಬಾಗಿಲು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನ ಹೊಂದಬಹುದು, ಪೋಷಕರು ತಮ್ಮ ಮಕ್ಕಳಲ್ಲಿನ ವಿಶೇಷ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯತ್ತ ಹೆಚ್ಚು ಆಸಕ್ತಿ ತೋರಿಸಿ ಹೆಚ್ಚು ಅಂಕ ಪಡೆಯುವುದರ ಜೊತೆಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮಲ್ಲಿನ ವಿಶೇಷ ಪ್ರತಿಭೆಗಳ ಮುಖಾಂತರ ಸಾಧನೆಯ ಗುರಿ ತಲುಪುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಯೋಗಿ, ಮುಖ್ಯ ಶಿಕ್ಷಕ ಸತೀಶ್ ಆರಾಧ್ಯ ಮಾತನಾಡಿದರು, ಹಿಟ್ನೆಹೆಬ್ಬಾಗಿಲು ಕ್ಲಸ್ಟರ್ ಮಟ್ಟದ ಶಾಲೆಗಳ ವಿದ್ಯಾರ್ಥಿಗಳು ಸಾಮೂಹಿಕ ಸ್ಪರ್ಧೆ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದರು, ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ರಾಜಶೇಖರ್, ಸದಸ್ಯರಾದ ಮಂಜುನಾಥ್, ಶ್ರೀಕಂಠ, ಯಜಮಾನ್ ಪುಟ್ಟರಾಜು, ಬಿಎಸ್ಪಿ ತಾಲೂಕು ಸಂಚಾಲಕ ಮಂಜು, ಮುಖಂಡರಾದ ಸಣ್ಣಕಾಳಯ್ಯ, ಬಸವರಾಜ್, ಗೋಪಾಲ, ರತ್ನಮ್ಮ ರಾಮಚಂದ್ರ, ಲತಾ ನಾಗರಾಜ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಗೀತಾ ಹಾಗೂ ಸದಸ್ಯರುಗಳು, ಶಿಕ್ಷಕರಾದ ಅಪ್ಸರ್, ಅನಿತಾ, ಪುಷ್ಪಲತಾ, ವಿವಿಧ ಶಾಲೆಗಳ ಶಿಕ್ಷಕರುಗಳು ಗ್ರಾಮಸ್ಥರು ಹಾಜರಿದ್ದರು.

Leave a Comment