ಪ್ರತ್ಯೇಕ ಅಪಘಾತ: ಇಬ್ಬರ ಸಾವು,ಮೂವರಿಗೆ ಗಾಯ

 

ಕಲಬುರಗಿ,ಮೇ.31-ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಹತ್ತಿರ ಬೈಕ್ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ವೀರೇಶ ಸಿದ್ರಾಮಪ್ಪ ಪೆದ್ದಿ (23) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಶಿವಾನಂದ ಸ್ಥಾವರಮಠ ಎಂಬಾತ ಗಾಯಗೊಂಡಿದ್ದಾನೆ.

ಇನ್ನೊಂದು ಪ್ರಕರಣದಲ್ಲಿ ಶಹಾಬಾದ ರಸ್ತೆಯ ನಂದೂರ ಹತ್ತಿರ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಲಾರಿಯಲ್ಲಿದ್ದ ಕಾರ್ಮಿಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಚಿತ್ತಾಪುರ ತಾಲ್ಲೂಕಿನ ಹೊನಗುಂಟಾ ಗ್ರಾಮದ ಬಾಬು ಮರೆಪ್ಪ ನಾಟಕಾರ (30) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

Share

Leave a Comment