ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿಗೆ  ಕೇಜ್ರಿ  ಆಹ್ವಾನ 

ನವದೆಹಲಿ.ಫೆ.14. ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರನ್ನು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಆಹ್ವಾನಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಅರವಿಂದ ಕೇಜ್ರಿವಾಲ್‌ ಅವರು ಪೆ.8ರಂದು ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದ್ದರು. 70 ಸದಸ್ಯರಿರುವ ದೆಹಲಿ ವಿಧಾನಸಭೆಯಲ್ಲಿ 62 ಸ್ಥಾನಗಳನ್ನು ಎಎಪಿ ತನ್ನದಾಗಿಸಿಕೊಂಡಿತ್ತು.

ಕೇಜ್ರಿವಾಲ್‌ ಅವರ ಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಅಭಿನಂದನೆ ತಿಳಿಸಿದ್ದರು.

Narendra Modi@narendramodi

Congratulations to AAP and Shri @ArvindKejriwal Ji for the

Leave a Comment