ಪ್ರವಾದಿ ಅವಹೇಳನ ಮಧುಗಿರಿ ಮೋದಿ ವಿರುದ್ಧ ದೂರು

ಮಡಿಕೇರಿ, ಫೆ.೧೮- ಪ್ರವಾದಿ ಮುಹಮ್ಮದ್ ಸ.ಅ ಹಾಗೂ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಅತುಲ್ ಕುಮಾರ್ ಯಾನೆ ಮಧುಗಿರಿ ಮೋದಿ ಎಂಬಾತನ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾರಿಸ್ ನಾಪೋಕ್ಲು ಅವರು ದೂರು ನೀಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅತುಲ್ ಕುಮಾರ್ ಎಂಬುವವರು ಮುಸ್ಲಿಮರ ಭಾವನೆಗೆ ದಕ್ಕೆ ತರುವ ರೀತಿಯಲ್ಲಿ ಪ್ರವಾದಿ ಮುಹಮ್ಮದ್ ಸ.ಅ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಮಾತನಾಡಿದ್ದು ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಾರಿಸ್ ದೂರಿನಲ್ಲಿ ತಿಳಿಸಿದ್ದಾರೆ.

Leave a Comment