ಪ್ರಾಥಮಿಕ ಶಾಲಾ ಶಿಕ್ಷಕರ ರ್ಯಾಲಿ 9 ರಂದು

 

ಕಲಬುರಗಿ ಜು 3:ವೃಂದ ಮತ್ತು ನೇಮಕಾತಿ ನಿಯಮ ಬದಲಾವಣೆ,ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವದು ಸೇರಿದಂತೆ ಏಳು ಪ್ರಮುಖ  ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಜುಲೈ 9 ರಂದು ನಗರದಲ್ಲಿ ರ್ಯಾಲಿಯ ಮೂಲಕ ಹಕ್ಕೊತ್ತಾಯ ಮಾಡಲಾಗುವದು. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಸಪ್ಟೆಂಬರ್ 5 ರಂದು ಶಿಕ್ಷಕರ ದಿನ ಬಹಿಷ್ಕರಿಸಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವದು ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗ ಆರಂಭವಾದ  ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್‍ನಲ್ಲಿ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ನಿವಾರಿಸಬೇಕು.6 ನೆಯ ವೇತನ ಆಯೋಗದ ಅಂತಿಮ ವರದಿ ಶಿಫಾರಸ್ಸಿನಂತೆ ಮುಖ್ಯಗುರುಗಳಿಗೆ ಬಡ್ತಿ ನೀಡುವಂತೆ ಆಗ್ರಹಿಸಲಾಗುವದು ಎಂದರು

ಸುದ್ದಿಗೋಷ್ಠಿಯಲ್ಲಿ ಪರಮೇಶ್ವರ ದೇಸಾಯಿ,ಸಿದ್ಧರಾಮ ಗುಣಾರಿ,ಶಿವಕುಮಾರ ಬಿರಾದಾರ,ಮಲ್ಲಣ್ಣ ಮೇತ್ರಿ,ಅಂಬುಬಾಯಿ ಕಲಶೆಟ್ಟಿ,  ಚನ್ನಮ್ಮ ಗೊಬ್ಬೂರಕರ್ ಸೇರಿದಂತೆ ಹಲವರಿದ್ದರು.

Leave a Comment