**ಪ್ರಿಯಾಂಕಾರೆಡ್ಡಿ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಆಗ್ರಹ;ಪ್ರತಿಭಟನೆ

ದಾವಣಗೆರೆ,ಡಿ,2; ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೆಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಹೈದರಾಬಾದ್ ನಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಜೀವಂತವಾಗಿ ದಹನ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು. ಘಟನೆ ನಡೆದು ಎರಡು ದಿನಗಳವರೆಗೆ ತನಿಖೆಯನ್ನು ಚುರುಕುಗೊಳಿಸದ ಪೋಲೀಸರ ನಡೆ ಖಂಡನೀಯ ಮತ್ತು ಸುರಕ್ಷತಾ ವೈಫಲ್ಯಕ್ಕೆ ಕಾರಣವಾಗಿದೆ.ತೆಲಂಗಾಣದ ಗೃಹಮಂತ್ರಿ ನೀಡಿದ ಹೇಳಿಕೆಯು ಅವರ ಕೀಳು ಮನಸ್ಥಿತಿ ಬಿಂಬಿಸುತ್ತಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ಯಾವುದೇ ಒಬ್ಬ ಮಹಿಳೆ ಸಹಾಯವನ್ನು ಅಪೇಕ್ಷಿಸಿದಾಗ ಪ್ರತಿಯಾಗಿ ಸಹಾಯ ಮಾಡುವ ಬದಲಾಗಿ ಆ ಮಹಿಳೆಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಜೀವಂತವಿರುವಾಗಲೇ ಸುಟ್ಟು ಕೊಲೆ ಮಾಡುವ ಮಾನಸಿಕತೆವುಳ್ಳವರು ಭೂಮಿ ಮೇಲೆ ಬದುಕಿರಲು ಯೋಗ್ಯರಲ್ಲ. ಅತ್ಯಾಚಾರಿಗಳಿಗೆ ಮರಣದಂಡನೆ ನೀಡಿ ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸದಂತಾಗಲಿ ಎಂದು ಒತ್ತಾಯಿಸಿದರು.
ಈ ವೇಳೆ ವಿವಿಧ ಕಾಲೇಜಿನ ವಿಧ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ನಂತರ ಜಯದೇವ ವೃತ್ತದ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಭಾಗದ ಸಂಚಾಲಕ ಯೋಗಾನಂದ,ಭೌವ್ಯ, ಕೀರಣ, ಕೋಟ್ರೇಶ್, ಆಕಾಶ್, ಅಶ್ವಿನಿ, ದೀಪ್ ಸೇರಿದಂತೆ ಮತ್ತಿತರರಿದ್ದರು.

Leave a Comment