ಪ್ರಿಯಾಂಕಾ ವಿಚಾರ-ಪಾಕ್‍ಗೆ ತೀವ್ರ ಮುಖಭಂಗ,

ವಿಶ್ವಸಂಸ್ಧೆ.ಆ.೨೩. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ತೀವ್ರ ಮುಖಭಂಗವಾಗಿದೆ.

ಯೂನಿಸೆಫ್ ನ ಸೌಹಾರ್ದಯುತ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರುವ ಪ್ರಿಯಾಂಕಾ ಚೋಪ್ರಾ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶರೀನ್ ಮಾಝಾರಿ ವಿಶ್ವಸಂಸ್ಥೆಗೆ ದೂರು ನೀಡಿದ್ದರು.

ಈ ದೂರಿಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ವಕ್ತಾರ, ಪ್ರಿಯಾಂಕಾ ಚೋಪ್ರಾ ಅವರಿಗೆ ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಮನವಿಯನ್ನು ತಿರಸ್ಕರಿಸಿದೆ.

ತಾವು ಆಸಕ್ತಿ ಹೊಂದಿರುವ ಹಾಗೂ ಕಾಳಜಿ ಹೊಂದಿರುವ ವಿಷಯಗಳ ಬಗ್ಗೆ ಸ್ವಂತ ಸಾಮರ್ಥ್ಯದಲ್ಲಿ ಮಾತನಾಡುವ ಹಕ್ಕು ಹೊಂದಿದ್ದಾರೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯಾ ಗುಟರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ಹೇಳಿದ್ದಾರೆ.

Leave a Comment