ಪ್ರೊ.ಎಸ್.ಆರ್.ನಿರಂಜನ ಅಭಿನಂದನಾ ಸಮಾರಂಭ 15 ರಂದು

=

ಕಲಬುರಗಿ,ಜೂ.13-ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಆರ್.ನಿರಂಜನ ಅವರು ಸೇವಾ ಅವಧಿ ಪೂರ್ಣಗೊಳಿಸಿದ ನಿಮಿತ್ತ ಅವರಿಗೆ ವಿವಿಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಜೂ.15 ರಂದು ಬೆಳಿಗ್ಗೆ 10.30ಕ್ಕೆ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೆಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದು, ಕುಲಸಚಿವ ಪ್ರೊ.ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು.

ವಿವಿಯ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಎಸ್.ಪಿ.ಮೇಲಕೇರಿ, ಕುಲಸಚಿವ (ಮೌಲ್ಯಮಾಪನ) ಪ್ರೊ.ಡಿ.ಎಂ.ಮದರಿ, ವಿತ್ತಾಧಿಕಾರಿ ಪ್ರೊ.ಲಕ್ಷ್ಮಣ ರಾಜನಾಳಕರ್ ಅತಿಥಿಗಳಾಗಿ ಆಗಮಿಸುವರು.

Leave a Comment