ಫಿಟ್ನೇಸ್ ಗೆ ಆದ್ಯತೆ ನೀಡುವಂತೆ ಕ್ರೀಡಾಪಟುಗಳಿಗೆ ಮೋದಿ ಸಲಹೆ

ನವದೆಹಲಿ, ಏ 3 -ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ಕ್ರೀಡಾಪಟುಗಳ ಜತೆ ವಿಡಿಯೋ ಸಂವಾದ ನಡೆಸಿದರು.
ಫಿಟ್ನೇಸ್ ನಿಂದ ಸೋಂಕು ವ್ಯಾಪಿಸದಂತೆ ನೋಡಿಕೊಳ್ಳಬಹುದು. ಫಿಟ್ನೆಸ್ ನಿಂದ ಆರೋಗ್ಯ ರಕ್ಷಣೆ ಸಾಧ್ಯವಾಗಲಿದ್ದು, ದೇಹ ಸದೃಢತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಪ್ರಧಾನಿ ಕ್ರೀಡಾಪಟುಗಳಿಗೆ ಸಲಹೆ ಮಾಡಿದ್ದಾರೆ.
ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸೇರಿದಂತೆ 40 ಕ್ರೀಡಾಪಟುಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.
ಕೊರೋನಾ ಸೋಂಕು ನಿಯಂತ್ರಣಕ್ಕೆ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದ್ದು, ಇದನ್ನು ಸಮರ್ಪಕವಾಗಿ ಜಾರಿಗೊಳಿಸುವ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವಂತೆ ಪ್ರಧಾನಿ ಅವರು ಕ್ರೀಡಾ ಪಟುಗಳಿಗೆ ಸಲಹೆ ಮಾಡಿದ್ದಾರೆ. ಜನ ಜಾಗೃತಿಗೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.

Leave a Comment