ಫೆ.9,10, ಕೆಂಗಲ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಬೆಂಗಳೂರು.ಫೆ.೬-ಕ್ರೀಡಾ ಚಟುವಟಿಕೆ ಮೂಲಕ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿರುವ ಕೆಂಗಲ್ ಹನಮಂತಯ್ಯ ಮೆಮೋರಿಯಲ್ ಟ್ರಸ್ಟ್ ನಿಂದ ಫೆ.9 ಮತ್ತು 10 ರಂದು ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ತಿಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮೊದಲ ಮುಖ್ಯಮಂತ್ರಿ, ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ  ರಾಜ್ಯಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಅಪಾರ. ರಾಜ್ಯ ನಿರ್ಮಾಣಕ್ಕೆ ಸುಸ್ಥಿರ ಅಡಿಪಾಯ ಹಾಕಿದ ಅವರ ಬಗ್ಗೆ ಯುವ ಜನಾಂಗದಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ “ಕೆಂಗಲ್ ಕಪ್” ಟೆನ್ನಿಸ್ ಬಾಲ್ ಟೂರ್ನಿ ಆಯೋಜಿಸಿದ್ದೇವೆ ಎಂದರು.

ಮಲ್ಲೇಶ್ವರಂ ಆಟದ ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ಪ್ರಥಮ ಬಹುಮಾನ ಗೆಲ್ಲುವ ತಂಡಕ್ಕೆ 1 ಲಕ್ಷ ರೂಪಾಯಿ ಬಹುಮಾನ ನಿಗದಿಗೊಳಿಸಲಾಗಿದೆ. 8 ಓವರ್ ಗಳ ಪಂದ್ಯಾವಳಿಯಲ್ಲಿ 16 ತಂಡಗಳು ಪಾಲ್ಗೊಳ್ಳಲಿವೆ. ಟೂರ್ನಿಯಲ್ಲಿ ಪಾಲ್ಗೊಳ್ಳಲು  ಪ್ರತಿ ತಂಡಕ್ಕೆ 5 ಸಾವಿರ ರೂಪಾಯಿಗಳ ಪ್ರವೇಶ ಧನ ನಿಗದಿಪಡಿಸಲಾಗಿದೆ. ತಂಡಗಳು ಪಾಲ್ಗೊಳ್ಳಲು ಅನುಭವ ಮೊದಲ ಆದ್ಯತೆಯಾಗಲಿದೆ ಎಂದರು.

 

Leave a Comment