ಫ್ಲೆಕ್ಸ್, ಹೋರ್ಡಿಂಗ್ ತೆರವು ಮನಪಾ ಚುನಾವಣೆ ಹಿನ್ನೆಲೆ

ಮಂಗಳೂರು, ಅ.೨೩- ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು ೬೦ ವಾರ್ಡ್‌ಗಳೂ ಸೇರಿದಂತೆ ರಾಜ್ಯದ ಒಟ್ಟು ೧೪ ನಗರ ಸ್ಥಳೀಯ ಸಂಸ್ಥೆಗಳಿಗೆ ನವಂಬರ್ ೧೨ರಂದು ಚುನಾವಣೆ ನಡೆಯಲಿದ್ದು ನವಂಬರ್ ೧೪ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ೫ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಸಹ ನಡೆಯಲಿದೆ. ಚುನಾವಣೆ ಘೋಷಣೆ ಆಗಿರುವ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು ನವೆಂಬರ್ ೧೪ರವರೆಗೆ ಜಾರಿಯಲ್ಲಿರುತ್ತದೆ. ಪಾಲಿಕೆಗೆ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಹಾಕಿರುವ ಬ್ಯಾನರ್, ಫ್ಲೆಕ್ಸ್ ಬೋರ್ಡ್‌ಗಳನ್ನು ನಗರಪಾಲಿಕೆಯ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ. ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಸೂಚನೆ ನೀಡಿದ್ದರು.

Leave a Comment