ಬಂದ್ ಬಿಸಿ ಬಾಲಕಿ ಸಾವು

ಪಾಟ್ನಾ, ಸೆ. ೧೦- ಕಾಂಗ್ರೆಸ್ ಪಕ್ಷ ಕರೆ ನೀಡಿದ ಭಾರತ್ ಬಂದ್ ವೇಳೆ 2 ವರ್ಷದ ಬಾಲಕಿಯೊಬ್ಬಳು ಸಕಾಲಕ್ಕೆ ಆಸ್ಪತ್ರೆಗೆ ತೆರಳಲು ಸಾಧ್ಯವಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿರುವ ವೇಳೆ ಪ್ರತಿಭಟನಾಕಾರರ ನಡುವೆ ಸಿಲುಕಿಕೊಂಡಿರುವ ಪರಿಣಾಮ ಆಕೆಯನ್ನು ಆಸ್ಪತ್ರೆಗೆ ಕರೆದೊಯಲು ತಡವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗಳನ್ನು ಆಸ್ಪತ್ರೆಗೆ ಆಟೋದಲ್ಲಿ ಕರೆದೊಯುತ್ತಿದ್ದ ವೇಳೆ ಪ್ರತಿಭಟನಾಕಾರರು ತಡೆ ಹಿಡಿದರು. ಹಾಗಾಗಿ ಮಗಳನ್ನು ಆಸ್ಪತ್ರೆಗೆ ಸೇರಿಸಲು ಸಾಧ್ಯವಾಗಲಿಲ್ಲ ಎಂದು ಪ್ರತಿಭಟನಾಕಾರರ ವಿರುದ್ಧ ಬಾಲಕಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment