ಬಟ್ಟೆ ಅಂಗಡಿಗೆ ಬೆಂಕಿ ಲಕ್ಷಾಂತರ ರೂ. ನಷ್ಟ

ಬೆಂಗಳೂರು, ಫೆ. ೧೨- ಕಮರ್ಷಿಯಲ್ ಸ್ಟ್ರೀಟ್‌ನ ಬಟ್ಟೆ ಅಂಗಡಿಯೊಂದಕ್ಕೆ ನಿನ್ನೆ ಮಧ್ಯರಾತ್ರಿ ಬೆಂಕಿಬಿದ್ದು, ಲಕ್ಷಾಂತರ ರೂ. ಗಳ ನಷ್ಟ ಸಂಭವಿಸಿದೆ.
ಕಮರ್ಷಿಯಲ್ ಸ್ಟ್ರೀಟ್‌ನ ಇಬ್ರಾಹಿಂ ಸ್ಟ್ರೀಟ್‌ನಲ್ಲಿನ ಡೈಮಂಡ್ ಪ್ಲಾಜಾದಲ್ಲಿರುವ ಬಟ್ಟೆ ಅಂಗಡಿಗೆ ರಾತ್ರಿ 12ರ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ.
ಬೆಂಕಿಯು ಕ್ಷಣಾರ್ಧದಲ್ಲಿ ಇಡೀ ಅಂಗಡಿ ಆವರಿಸಿ ಬೆಂಕಿ ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಬೆಂಕಿ ನಂದಿಸಿವೆ. ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯಿಂದ ಸುಮಾರು 4 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವರ್ಕ್ ಶಾಪ್‌ಗೆ ಬೆಂಕಿ
ಕಾಮಾಕ್ಷಿಪಾಳ್ಯದ ಕಾವೇರಿಪುರದಲ್ಲಿನ ಲಕ್ಷ್ಮಿ ವೆಂಕಟೇಶ್ವರ ಇಂಜಿನಿಯರಿಂಗ್ ವರ್ಕ್ ಶಾಪ್‌ಗೆ ನಿನ್ನೆರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ವರ್ಕ್ ಶಾಪ್‌ನಲ್ಲಿದ್ದ ವಸ್ತುಗಳೆಲ್ಲಾ ಸುಟ್ಟುಹೋಗಿವೆ.
ಸುದ್ದಿ ತಿಳಿದ ತಕ್ಷಣ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ.

Leave a Comment