ಬಟ್ಟೆ ಅಂಗಡಿ ಮಾಲೀಕನಿಗೆ ಧರ್ಮದೇಟು

ದಾವಣಗೆರೆ, ಮಾ. 24 – ನಗರದ ಚೌಕಿಪೇಟೆಯಲ್ಲಿ ನಿಷೇಧಾಜ್ಞೆ ಇದ್ದರು ಸಹ ಬಟ್ಟೆ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿದ್ದ ಹಿನ್ನಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಬಟ್ಟೆ ಅಂಗಡಿಗೆ ನುಗ್ಗಿ ಮಾಲೀಕನಿಗೆ ಧರ್ಮದೇಟು ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಾಗಿದೆ. ಆದರು ಸಹ ಕದ್ದು ಮುಚ್ಚಿ ಬಟ್ಟೆ ವ್ಯಾಪಾರ ಮಾಡುತ್ತಿರುವುದು ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿಗಳ ಗಮನಕ್ಕೆ ಬಂದಿದೆ. ಕೂಡಲೇ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿಗಳ ತಂಡ ನಗರ ಪ್ರದಕ್ಷಣೆ ಮುಂದಾಗಿದ್ದರು. ಈ ವೇಳೆ ಅಂಗಡಿ ಬಂದ್ ಮಾಡುವಂತೆ ಮನವಿ ಮಾಡಿದ್ದರು ಸಹ ಲೆಕ್ಕಿಸದ ಮಾಲೀಕ ಕೆಲಸಗಾರರೊಂದಿಗೆ ವ್ಯಾಪಾರ ಮಾಡುತ್ತಿದ್ದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಲಾಕ್ ಡೌನ್ ಮಾಡುವಂತೆ ಸೂಚಿಸಿದರು.

Leave a Comment